ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜದಲ್ಲಿ ಪುರುಷರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಾರೆ. ಅಂತಹ ಸಾಕಷ್ಟು ಪ್ರಕರಣಗಳು ನಮ್ಮ ಮುಂದಿದ್ದು, ಈ ಬಗ್ಗೆ ಅಗತ್ಯ ಕ್ರಮ ಜರುಗಿಸಬೇಕಿದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅತ್ಯಾಚಾರ ಸಂತ್ರಸ್ತರನ್ನು ಪರೀಕ್ಷಿಸಲು ಮಹಿಳಾ ಸ್ತ್ರೀರೋಗತಜ್ಞರನ್ನು ಪರಿಗಣನೆಗೆ ತೆಗೆದುಕೊಳ್ಳುವ ಪ್ರೋಟೋಕಾಲ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಧೀಶರಾದ ದೇವನ್ ರಾಮಚಂದ್ರನ್ , ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಣ್ಣು ಮಕ್ಕಳು ಮಾತ್ರವಲ್ಲದೆ ಗಂಡು ಮಕ್ಕಳ ಮೇಲೆ ನಡೆಯುತ್ತದೆ. ಅಪರೂಪದ ಘಟನೆಯಾದರೂ ಇದಕ್ಕೆ ಸಂಬಂಧಿಸಿದಂತೆ ಅನೇಕ ನಿದರ್ಶನಗಳಿವೆ ಎಂದರು.
ಸಮಾಜದಲ್ಲಿ ಶೇ. 99ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುತ್ತಾರೆ. ಅಪ್ರಾಪ್ತ ವಯಸ್ಕ ಬಾಲಕರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಾರೆ. ನಾನು ಇತ್ತೀಚಿನ ದಿನಗಳಲ್ಲಿ ಗಮನಿಸಿದಾಗ ಹುಡುಗರು ಹೆಚ್ಚಿನವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪೋಕ್ಸೋ ಕಾಯ್ದೆ ಕಟ್ಟುನಿಟ್ಟಿನ ಜಾರಿ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದು ಭಿಪ್ರಾಯಪಟ್ಟರು.
ಇದೇ ವೇಳೆ ಯಾವ ಆಧಾರದ ಮೇಲೆ ಅರ್ಜಿ ಸಲ್ಲಿಕೆಯಾಗಿದೆ ಎಂಬುದು ನನಗೆ ಈವರೆಗೆ ಅರ್ಥವಾಗಿಲ್ಲ. ನೀವು (ಅರ್ಜಿದಾರರು) ಈ ವಿಚಾರವನ್ನು ಸಾಮಾಜಿಕ ಬದ್ಧತೆಯಿಂದ ಅರ್ಜಿ ಸಲ್ಲಿಸಿದ್ದರೆ ನಮ್ಮ ಆಕ್ಷೇಪವಿಲ್ಲ. ಒಂದು ವೇಳೆ ಏನಾದರು ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳುತ್ತಾ ನ್ಯಾಯಾಧೀಶರು ವಿಚಾರಣೆಯನ್ನು ಮಾರ್ಚ್ 05ಕ್ಕೆ ಮುಂದೂಡಿದ್ದಾರೆ.