ಖಾದರ್‌ಗೆ ಅಷ್ಟೇ ಅಲ್ಲ ನನಗೂ ಬೆದರಿಕೆ ಕರೆ ಬಂದಿದೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದ್ದು, ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನನಗೂ ಬೆದರಿಕೆ ಕರೆಗಳು ಬರುತ್ತಿವೆ, ಏನು ಮಾಡಬೇಕು? ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಬೆದರಿಕೆ ಕರೆಗಳನ್ನು ಮಾಡುತ್ತಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೇಳಿದ್ದೇವೆ ಎಂದರು.

ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!