ಏಪ್ರಿಲ್ ನಲ್ಲಿ ಬ್ಯಾಂಕ್ ನತ್ತ ಹೋಗುವ ಮುನ್ನ ಗಮನಿಸಿ…: ಈ ದಿನಗಳು ಇರುತ್ತೆ ರಜೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ ತಿಂಗಳ ಪ್ರಾರಂಭಕ್ಕೆ ಇನ್ನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಉಳಿದಿದ್ದು, ಹೀಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಬ್ಯಾಂಕುಗಳ ರಜಾಪಟ್ಟಿ ಬಿಡುಗಡೆ ಮಾಡಿದೆ.

ಏಪ್ರಿಲ್ ತಿಂಗಳಲ್ಲಿ ಒಟ್ಟು 14 ದಿನಗಳ ಕಾಲ ಬ್ಯಾಂಕುಗಳು ಕಾರ್ಯನಿರ್ವಹಿಸೋದಿಲ್ಲ. ಇನ್ನು ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರ ಕೂಡ ಬ್ಯಾಂಕುಗಳಿಗೆ ಎಂದಿನಂತೆ ರಜೆಯಿರುತ್ತದೆ.

ಆದರೆ, ಈ ರಜಾದಿನಗಳಂದು ಎಟಿಎಂ, ಆನ್ ಲೈನ್ ಬ್ಯಾಂಕಿಂಗ್ ವ್ಯವಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಇದರಲ್ಲಿ ಯಾವುದೇ ವ್ಯತ್ಯಾಸವಿರೋದಿಲ್ಲ.

ಇನ್ನು ಸಾಮಾನ್ಯವಾಗಿ ಎಲ್ಲ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ದೇಶಾದ್ಯಂತ ಎಲ್ಲ ಬ್ಯಾಂಕುಗಳಿಗೆ ರಜೆಯಿರುತ್ತದೆ.ಆಯಾ ಪ್ರಾದೇಶಿಕ ಆಚರಣೆಗಳು ಹಾಗೂ ಹಬ್ಬಗಳಿಗೆ ಅನುಗುಣವಾಗಿ ರಜೆಗಳನ್ನು ನೀಡಲಾಗುತ್ತದೆ. ಆದರೆ, ಸಾರ್ವಜನಿಕ ಹಾಗೂ ಗೆಜೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕುಗಳಿಗೂ ಅನ್ವಯಿಸುತ್ತವೆ. ರಜಾ ದಿನಗಳಂದು ಆನ್ ಲೈನ್ ವಹಿವಾಟುಗಳಿಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ಬ್ಯಾಂಕಿಗೆ ಭೇಟಿ ನೀಡಿ ಮಾಡಲೇಬೇಕಾದ ಕೆಲಸವಿದ್ರೆ ರಜಾಪಟ್ಟಿ ನೋಡಿಕೊಂಡು ಹೋಗೋದು ಉತ್ತಮ.

ಬ್ಯಾಂಕ್ (Bank) ರಜೆಗಳನ್ನು (Holidays) ಆರ್ ಬಿಐ (RBI) ಮೂರು ವರ್ಗಗಳನ್ನಾಗಿ ವಿಂಗಡಿಸಿದೆ.1.ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜಾದಿನ, 2. ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್ಮೆಂಟ್ ರಜೆಗಳು ಹಾಗೂ 3.ಅಕೌಂಟ್ಸ್​ ಕ್ಲೋಸಿಂಗ್ ರಜೆಗಳು (Accounts Closing Holidays). ಆರ್ ಬಿಐ (RBI) ರಜಾಪಟ್ಟಿಯಲ್ಲಿರೋ ರಜೆಗಳು ಸಾರ್ವಜನಿಕ ವಲಯ (Public sector), ಖಾಸಗಿ ವಲಯ (Private sector), ವಿದೇಶಿ ಬ್ಯಾಂಕುಗಳು (Foreign banks),ಕೋ-ಆಪರೇಟಿವ್ ಬ್ಯಾಂಕುಗಳು (Co-operative banks) ಹಾಗೂ ಪ್ರಾದೇಶಿಕ ಬ್ಯಾಂಕುಗಳಿಗೆ (Regional banks) ಅನ್ವಯಿಸಲಿವೆ.

ಏಪ್ರಿಲ್ ತಿಂಗಳ ರಜಾಪಟ್ಟಿ ಹೀಗಿದೆ:
ಏಪ್ರಿಲ್ 1: ವಾರ್ಷಿಕ ಖಾತೆಗಳ ಕ್ಲೋಸಿಂಗ್ ಹಿನ್ನೆಲೆಯಲ್ಲಿ ರಜೆ.
ಏಪ್ರಿಲ್ 5: ಬಾಬು ಜಗ್ಜೀವನ್ ರಾಮ್ ಹುಟ್ಟುಹಬ್ಬ/ಜುಮತ್ -ಉಲ್-ವಿದ
ಏಪ್ರಿಲ್ 7: ಭಾನುವಾರ
ಏಪ್ರಿಲ್ 9: ಗುದಿ ಪಡ್ವಾ/ಯುಗಾದಿ ಹಬ್ಬ/ತೆಲುಗು ಹೊಸ ವರ್ಷದ ದಿನ/ ಮೊದಲ ನವರಾತ್ರ
ಏಪ್ರಿಲ್ 10: ರಂಜಾನ್ -ಇದ್ (ಈದ್ -ಉಲ್ -ಫಿತರ್)
ಏಪ್ರಿಲ್ 11: ರಂಜಾನ್ -ಇದ್ (ಈದ್ -ಉಲ್ -ಫಿತರ್)
ಏಪ್ರಿಲ್ 13: ಬೊಹಗ್ ಬಿಹು/ಛೆರೊಬ/ಬೈಸಾಕಿ/ಬಿಜು ಹಬ್ಬ
ಏಪ್ರಿಲ್ 14: ಭಾನುವಾರ
ಏಪ್ರಿಲ್ 15: ಬೊಹಗ್ ಬಿಹು/ಹಿಮಾಚಲ ದಿನ
ಏಪ್ರಿಲ್ 17: ಶ್ರೀರಾಮ ನವಮಿ (ಚೈತೆ ದಸೈನ್)
ಏಪ್ರಿಲ್ 20: ಗರಿಯಾ ಪೂಜಾ
ಏಪ್ರಿಲ್ 21: ಭಾನುವಾರ
ಏಪ್ರಿಲ್ 27: ನಾಲ್ಕನೇ ಶನಿವಾರ
ಏಪ್ರಿಲ್ 28: ಭಾನುವಾರ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!