ಗಮನಿಸಿ….ಸಿಇಟಿ ಪರೀಕ್ಷಾ ದಿನಾಂಕ ಬದಲಾವಣೆ

 ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 20, 21 ಹಾಗೂ 22ಕ್ಕೆ ನಿಗದಿಯಾಗಿದ್ದ ಸಿಇಟಿ ಪರೀಕ್ಷಾ (CET Exam) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬದಲಾವಣೆ ಮಾಡಿದೆ.

ಏಪ್ರಿಲ್ 20ರಿಂದ 22ರ ವರೆಗೆ ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19 ಹಾಗೂ 20ಕ್ಕೆ ನಿಗದಿ ಮಾಡಲಾಗಿದೆ. ಏಪ್ರಿಲ್ 21ರಂದು ಎನ್‌ಡಿಎ (National Defence Academy) ಪರೀಕ್ಷೆ ಇರುವ ಹಿನ್ನೆಲೆ ಸಿಇಟಿ ಪರೀಕ್ಷಾ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ.

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಏಪ್ರಿಲ್ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಈ ಹಿಂದೆ ನಿಗದಿ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!