ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ದೆಹಲಿಗೆ ಮೊದಲ ಅಧಿಕೃತ ಭೇಟಿ ನೀಡಿರುವ ಒಮರ್ ಅಬ್ದುಲ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಿ ಮೋದಿ ಅವರ ಜೊತೆ ಒಮರ್ ಅಬ್ದುಲ್ಲಾ ಅವರು ಪ್ರಸ್ತುತ ಭದ್ರತಾ ಪರಿಸ್ಥಿತಿ ಮತ್ತು ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಚರ್ಚಿಸಿದರು.
ಈ ವೇಳೆ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನವನ್ನು ಶೀಘ್ರವಾಗಿ ಮರುಸ್ಥಾಪಿಸಲು ಕಳೆದ ವಾರ ತನ್ನ ಕ್ಯಾಬಿನೆಟ್ ಅಂಗೀಕರಿಸಿದ ನಿರ್ಣಯವನ್ನು ಪ್ರಧಾನಿ ಮೋದಿ ಅವರಿ ಹಸ್ತಾಂತರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.