ವಾಹನ ಸವಾರರೇ ಗಮನಿಸಿ 2 ತಿಂಗಳು ಬಾಳೆಬರೆ ಘಾಟ್ ಬಂದ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕುಂದಾಪುರ -ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಿಸಬೇಕಿರುವುದರಿಂದ ಫೆ. 05 ರಿಂದ ಏಪ್ರಿಲ್ 05 ರವರೆಗೆ ರಸ್ತೆ ಬಂದ್ ಮಾಡಲಾಗುವುದು.

ಹೀಗಾಗಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಮೂಲಕ ಹಾಗೂ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ರಸ್ತೆ ಮೂಲಕ, ರಾಜ್ಯ ಹೆದ್ದಾರಿ-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ-ಕಾನುಗೋಡು-ನಗರ-ಕೊಲ್ಲೂರು ಕುಂದಾಪುರ ಮೂಲಕ ಹಾಗೂ ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಬೇಕೆಂದು ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!