ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಇನ್ಮುಂದೆ ಸೋಮವಾರ ಮುಂಜಾನೆ 4.15ರಿಂದ ಸಂಚಾರ ಶುರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಮೆಟ್ರೋ ರೈಲಿನ ಸೋಮವಾರದ ಸಂಚಾರದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ಸೋಮವಾರ ದಿನದಂದು ಮಾತ್ರ ಮೆಟ್ರೋ ಸೇವೆ ಮುಂಜಾನೆ ಬೆಳಗ್ಗೆ 4.15 ರಿಂದ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ(ಬಿಎಂಆರ್‌ಸಿಎಲ್) ತಿಳಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್ ಸಂಸ್ಥೆಯು ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ. ಈ ಹಿನ್ನೆಲೆಯಲ್ಲಿ, ನಮ್ಮ ಮೆಟ್ರೋ ನಿಗಮವು ಪ್ರತಿ ಸೋಮವಾರದಂದು ಮಾತ್ರ ಮೆಟ್ರೋ ಸೇವೆಯನ್ನು 2025ರ ಜ.13ರಿಂದ ಜಾರಿಗೆ ಬರುವಂತೆ ಬೆಳಗ್ಗೆ 4:15 ರಿಂದ ಪ್ರಾರಂಭಿಸಲಿದೆ. ಈಗ ಮುಂಜಾನೆ 5:00 ಮೆಟ್ರೋ ಸೇವೆ ಆರಂಭವಾಗುತ್ತಿದ್ದು, ಅದನ್ನು ಸೋಮವಾರ ಮಾತ್ರ 45 ನಿಮಿಷ ಮುಂಚಿತವಾಗಿ ಆರಂಭಿಸಲಾಗುತ್ತಿದೆ.

ಉಳಿದಂತೆ ವಾರದ ಉಳಿದ ಎಲ್ಲ ದಿನಗಳಂದು ಮೆಟ್ರೋ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದ ದಿನಗಳಲ್ಲಿ ಎಂದಿನಂತೆ ಬೆಳಗ್ಗೆ 5 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

ಇನ್ನುಮುಂದೆ ಪ್ರತಿ ಸೋಮವಾರ ಬೆಳಗ್ಗೆ ಬೆಂಗಳೂರು ನಗರಕ್ಕೆ ಬರುವ ಸಾರ್ವಜನಿಕರು 4.15ರಿಂದಲೇ ಮೆಟ್ರೋ ಸೇವೆಯನ್ನು ಪಡೆದುಕೊಳ್ಳಬಹುದು. ಮೆಟ್ರೋ ಮಾರ್ಗದ ನಾಲ್ಕು ಡಿಪೋಗಳಿಂದ ಬೆಳಗ್ಗೆಯೇ ಮೆಟ್ರೋ ಸೇವೆ ಆರಂಭವಾಗಲಿದೆ. ಸಾರ್ವಜನಿಕರು ತಮ್ಮ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!