May 28, 2026
Thursday, May 28, 2026
spot_img

ವಿದ್ಯಾರ್ಥಿಗಳೇ ಗಮನಿಸಿ: ಎನ್ ಟಿಎಯಿಂದ CUET-UG ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ CUET UG 2026 ರ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪ್ರಕಟಿಸಿದೆ.

ಮೇ 28ರಂದು ನಡೆಯಬೇಕಿದ್ದ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಹೊಸ ದಿನಾಂಕಗಳನ್ನು ಘೋಷಿಸಲಾಗಿದೆ. ಅದರಂತೆ ಮೇ 31, ಜೂನ್ 6 ಮತ್ತು ಜೂನ್ 7ರಂದು ಪರೀಕ್ಷೆ ನಡೆಯಲಿವೆ.

ಅಧಿಕೃತ ವೆಬ್‌ಸೈಟ್ ಪರಿಶೀಲಿಸಿ

ಮೇ 31ರಂದು ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಅಧಿಕೃತ ವೆಬ್‌ಸೈಟ್ cuet.nta.nic.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದೆ. ಉಳಿದಂತೆ ಜೂನ್ 6 ಮತ್ತು 7ರಂದು ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಸಂಸ್ಥೆ ಹೇಳಿದೆ.

ಏನಿದು CUET-UG?

CUET-UG ಅಂದರೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಯಾಗಿದ್ದು, ಕೇಂದ್ರ, ರಾಜ್ಯ ಹಾಗೂ ಕೆಲವು ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಪ್ರವೇಶ ಪ್ರಕ್ರಿಯೆಯನ್ನು ಏಕರೂಪಗೊಳಿಸುವ ಉದ್ದೇಶದಿಂದ ಪರಿಚಯಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಸಹಕಾರಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !