ಸಾರ್ವಜನಿಕರೇ ಗಮನಿಸಿ…ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದರೆ ನಿಮಗೆ ಸಿಗುತ್ತೆ ಭರ್ಜರಿ ಗಿಫ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಗಳಿಗೆ ಸಹಾಯ ಮಾಡಿ, ಆಸ್ಪತ್ರೆಗೆ ಸಾಗಿಸುವಲ್ಲಿ ಪ್ರೇರೇಪಿಸುವ ನಿಟ್ಟಿನಲ್ಲಿ ಜನರಿಗಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯ, ಜೀವಪಕ್ಷಕರಿಗೆ ನಗದು ಪ್ರಶಸ್ತಿ ನೀಡುವ ಯೋಜನೆ ಘೋಷಿಸಿದೆ.
ಈ ಯೋಜನೆಯ ಅನುಸಾರವಾಗಿ ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಸುವರ್ಣಾವಧಿಯೊಳಗೆ ಆಸ್ಪತ್ರೆಗೆ ಸಾಗಿಸಿದ ವ್ಯಕ್ತಿಗಳಿಗೆ ಪ್ರತಿ ಘಟನೆಗೆ ಜೀವರಕ್ಷಕ ಎಂಬುದಾಗಿ ಹೇಳಿ ರೂ.5,000 ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.
ಈ ಕುರಿತಂತೆ ರಾಜ್ಯ ಸರ್ಕಾರ ಕೂಡ ಅನುಷ್ಠಾನಗೊಳಿಸೋ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಯೋಜನೆಯ ಪರಿಶೀಲನಾ ಸಮಿತಿ ಮತ್ತು ಜಿಲ್ಲಾ ಮಟ್ಟದ ಮೌನ್ಯಮಾಪನ ಸಮಿತಿಯನ್ನು ರಚಿಸಿ ಆದೇಶಿಸಿದೆ.
ದಿನಾಂಕ 15-10-2021ರಿಂದ 31-03-2026ರವರೆಗೆ ಜೀವರಕ್ಷಕರಿಗೆ ನಗದು ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಸಾರ್ವಜನಿಕರಲ್ಲಿ ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಗಳನ್ನು ಸುವರ್ಣ ಅವಧಿಯೊಳಗೆ ಸಹಾಯ ಮಾಡಿ, ಆಸ್ಪತ್ರೆಗೆ ಸಾಗಿಸುವಲ್ಲಿ ಪ್ರೇರೇಪಿಸುವುದು, ಈ ಯೋಜನೆಯ ಉದ್ದೇಶವಾಗಿರುತ್ತದೆ.ಭಾರತ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯವು ನೀಡಿರುವ ಮಾರ್ಗಸೂಚಿಯಂತೆ ಜೀವ ರಕ್ಷಕನನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದ ಮೌಲ್ಯಮಾಪನ ಸಮಿತಿಯನ್ನು ಮತ್ತು ರಾಜ್ಯ ಮಟ್ಟದಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಿದೆ.
ರಾಜ್ಯ ಮಟ್ಟದಲ್ಲಿ ಯೋಜನೆಯ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇರಲಿದ್ದಾರೆ. ಸದಸ್ಯರಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಆಯುಕ್ತರು ಸಂಚಾರ ಮತ್ತು ರಸ್ತೆ ಸುರಕ್ಷತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಸದಸ್ಯ ಕಾರ್ಯದರ್ಶಿಯಾಗಿ ಸಾರಿಗೆ ಇಲಾಖೆಯ ಆಯುಕ್ತರಿರುತ್ತಾರೆ.


ರಾಷ್ಟ್ರಮಟ್ಟದ ಸಮಿತಿಯು ಮೂರು ಅತ್ಯುತ್ತಮ ಪ್ರಸ್ತಾವನೆಗಳನ್ನು ರಾಷ್ಟ್ರಮಟ್ಟದ ಪ್ರಶಸ್ತಿಗಾಗಿ ಪ್ರತೀ ವರ್ಷ ಸೆಪ್ಟೆಂಬರ್ 30 ಅಥವಾ ಕೇಂದ್ರ ಹೆದ್ದಾರಿ ಸಚಿವಾಲಯ ನಿರ್ಧರಿಸುವ ದಿನಾಂಕದೊಳಗೆ ಸಲ್ಲಿಸಲಿದೆ.ಇನ್ನೂ ಜಿಲ್ಲಾಮಟ್ಟದ ಮೌಲ್ಯಮಾಪನ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾಧಿಕಾರಿಗಳು ಇರಲಿದ್ದಾರೆ. ಸದಸ್ಯರಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿಹೆಚ್‌ಓ ಇರಲಿದ್ದಾರೆ. ಸದಸ್ಯ ಕಾರ್ಯದರ್ಶಿಯಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಇರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!