Sunday, August 14, 2022

Latest Posts

ಖ್ಯಾತ ಬಾಲಿವುಡ್ ನಟಿ ‘ಸುರೇಖಾ ಸಿಕ್ರಿ’ ಇನ್ನಿಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಾಲಿವುಡ್ ನ ಹಿರಿಯ ನಟಿ ಸುರೇಖಾ ಸಿಕ್ರಿ(75) ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ನಟಿ ಸುರೇಖಾ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಎರಡನೇ ಬಾರಿ ಬ್ರೈನ್ ಸ್ಟ್ರೋಕ್ ಆಗಿತ್ತು. ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಮ್ಯಾನೇಜರ್ ವಿವೇಕ್ ಸಿಧ್ವಾನಿ ತಿಳಿಸಿದ್ದಾರೆ.

ಸಿಕ್ರಿ ಅವರು ‘ಬಧಾಯಿ ಹೊ’ ಚಿತ್ರ ಹಾಗೂ ‘ಬಾಲಿಕಾ ವಧು’ ಧಾರವಾಹಿಗಳ ಪಾತ್ರಗಳಿಂದ ಬಹಳ ಪ್ರಸಿದ್ಧಿ ಪಡೆದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss