ಬಂಗಾಳದಲ್ಲಿ ಲಂಚವಿಲ್ಲದೆ ಏನೂ ಆಗುವುದಿಲ್ಲ: ದೀದಿ ಸರಕಾರ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲಂಚವಿಲ್ಲದೆ ಪಶ್ಚಿಮ ಬಂಗಾಳದಲ್ಲಿ ಏನೂ ಆಗುವುದಿಲ್ಲ ಎಂದು ಪ್ರಧಾನಿ ಮೋದಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಲ್ಡಾದಲ್ಲಿ ಚುನಾವಣೆ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು,ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಿಂದಾಗಿ ಸುಮಾರು 26,000 ಕುಟುಂಬಗಳ ಜೀವನೋಪಾಯವನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಟಿಎಂಸಿ ನಾಯಕರಿಗೆ ಲಂಚ ನೀಡಲು ಸಾಲ ಪಡೆದ ಆಕಾಂಕ್ಷಿಗಳು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿಎಂಸಿ ಹಗರಣದಲ್ಲಿ ತೊಡಗಿಸಿಕೊಂಡಿದೆ. ರಾಜ್ಯದ ಯುವಜನತೆಯ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿಯ ಹಗರಣ ಮಾತ್ರ ಅಸ್ತಿತ್ವದಲ್ಲಿದೆ. ಟಿಎಂಸಿ ತಪ್ಪಿತ್ತಸ್ಥ ಆಗಿದ್ದರೂ ಇಡೀ ರಾಜ್ಯವೇ ಬೆಲೆ ತೆರಬೇಕಾಯಿತು ಎಂದು ಅವರು ಟೀಕಿಸಿದ್ದಾರೆ.

ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸುತ್ತಿರುವ ಕಾಂಗ್ರೆಸ್ ಹಾಗೂ ಟಿಎಂಸಿ ಗೆ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಸಿಎಎ ಯಾವುದೇ ಪ್ರಜೆಯ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಟಿಎಂಸಿ ಪಕ್ಷಗಳ ನಡುವೆ ತುಷ್ಟೀಕರಣ ರಾಜಕಾರಣ ನಡೆಯುತ್ತಿದೆ. ನಿಮ್ಮ ಸಂಪತ್ತನ್ನು ಕಸಿದುಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಆದರೆ ಇದನ್ನು ಟಿಎಂಸಿ ವಿರೋಧಿಸುತ್ತಿಲ್ಲ. ಬಾಂಗ್ಲಾದೇಶದ ನುಸುಳುಕೋರರಿಗೆ ನೆಲೆ ಒದಗಿಸಲು ರಾಜ್ಯ ಸರ್ಕಾರ ಬಯಸುತ್ತಿದೆ. ಅಂತವರಿಗೆ ಸಂಪತ್ತು ಹಂಚಿಕೆ ಕುರಿತು ಕಾಂಗ್ರೆಸ್ ಮಾತನಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!