ಯಾವುದನ್ನೂ ಫ್ರೀ ಕೊಡಬಾರದು, ಉಚಿತ ಯೋಜನೆ ಡೇಂಜರಸ್‌: ಆರ್​ವಿ ದೇಶಪಾಂಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್​​ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!