ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ, ಬೆಳಗ್ಗೆ ಸ್ವಲ್ಪ ಚಳಿ ಜತೆ ಬಿಸಿಲು ಇದೆ. ಕರಾವಳಿ ಹಾಗೂ ಉತ್ತರ ಒಳನಾಡು ತೀವ್ರ ಚಳಿ ಜತೆಗೆ ಒಣಹವೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.



