ಹುಬ್ಬಳ್ಳಿ ಅಗ್ನಿ ಅವಘಡ ಪ್ರಕರಣ: ಅನಧಿಕೃತ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ತಾರಿಹಾಳದಲ್ಲಿ 14 ಕೈಗಾರಿಕಾ ವಸಾಹತು ಪ್ರದೇಶಗಳಿವೆ. ಅನಧಿಕೃತವಾಗಿ ನಡೆಸುತ್ತಿರುವ ಕಾರ್ಖಾನೆಗಳನ್ನು ಮೂರು ದಿನದಲ್ಲಿ ಸರ್ವೇ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅವರ ಮೇಲೆ ಕಠಿಣ ಕ್ರಮತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ತಿಳಿಸಿದರು.

ನಗರದ ಹೊರವಲಯದ ತಾರಿಹಾಳದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಅಗ್ನಿ ಅವಘಡವಾಗಿರುವ ಕಾರ್ಖಾನೆಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅವಘಡದಲ್ಲಿ ಎಂಟು ಜನರು ಗಾಯಗೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ಸರಿಯಾದ ಸಮಯಕ್ಕೆ‌ ಪೊಲೀಸ್ ಇಲಾಖೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಜಿಲ್ಲಾಡಳಿತಕ್ಕೆ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಒಂದು ತಿಂಗಳ ಹಿಂದೆ ಕಾರ್ಖಾನೆ ಆರಂಭವಾಗಿತ್ತು. ಕಾನೂನಿನ ಪ್ರಕಾರ ಕಾರ್ಖಾನೆ ನಡೆಸಲು ಪರವಾನಗಿ ಪಡೆಯಬೇಕು. ಆದರೆ ಯಾವ ಇಲಾಖೆಯಲ್ಲಿ ಕಾರ್ಖಾನೆ ನೋಂದಣಿ ಮಾಡಿಸಿಲ್ಲ. ಅಧಿಕಾರಿಗಳು ಈಗಾಗಲೇ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಕಾರ್ಖಾನೆಯಾದರು ಮುಂಜಾಗೃತ ಕ್ರಮ ತೆಗದುಕೊಳ್ಳಬೇಕು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!