ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು.

ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!