September 16, 2026
Wednesday, September 16, 2026
spot_img

ಏಪ್ರಿಲ್‌ನಲ್ಲಿ ಅಧಿಸೂಚನೆ, ಮೇ ತಿಂಗಳಲ್ಲಿ ಚುನಾವಣೆ: ಜಿಬಿಎ ಸಮರಕ್ಕೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯ ಐತಿಹಾಸಿಕ ‘ಬೆಂಗಳೂರು ಕರಗ’ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಹಬ್ಬವನ್ನು ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ವೈಭವದಿಂದ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜಿಬಿಎ ಚುನಾವಣೆಯ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡಿದರು. ಏಪ್ರಿಲ್ 6ರಂದು ಚುನಾವಣೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಅದಾದ ಸರಿಯಾಗಿ ಒಂದು ತಿಂಗಳ ನಂತರ ಅಂದರೆ ಮೇ ತಿಂಗಳಲ್ಲಿ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ‘ವಿಷನ್ ಗ್ರೂಪ್’ ರಚಿಸಲಾಗಿದ್ದು, ಅತಿಕ್ರಮಣವಾಗಿರುವ ಆಸ್ತಿಗಳನ್ನು ಮರಳಿ ಸುಪರ್ದಿಗೆ ಪಡೆಯುವ ಪ್ರಕ್ರಿಯೆ ಚುರುಕುಗೊಂಡಿದೆ. ದೇವಸ್ಥಾನಗಳ ಆಸ್ತಿಯನ್ನು ರಕ್ಷಿಸಲು ‘ಜಿಯೋ ಫೆನ್ಸಿಂಗ್’ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಗ್ರಾಮೀಣ ಭಾಗದಲ್ಲಿ ದೇವಸ್ಥಾನಗಳ ದತ್ತು ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !