ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೋಸ್ಟ್ ವಾಂಟೆಂಡ್ ರೌಡಿ ಶೀಟರ್ನನ್ನು ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿಯನ್ನು ಕೊನೆಗೆ ಬಲೆಗೆ ಬೀಳಿಸಿದ್ದಾರೆ .
ಕಳೆದ ಎರಡು ಮೂರು ತಿಂಗಳಿನಿಂದ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಗಿರಿ ಬಾಡಿಗೆ ಮನೆ ಮಾಡಿಕೊಂಡಿದ್ದ. ಇದರ ಖಚಿತ ಮಾಹಿತಿ ಪಡೆದ ಬ್ಯಾಡರಹಳ್ಳಿ ಪೊಲೀಸರು ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಕುಣಿಗಲ್ ಗಿರಿ ಹಾಗೂ ಆತನ ಸಹಚರ ಹರೀಶ್ ಇರುವುದು ಕಂಡು ಬಂದಿದೆ.
ಆತನ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.