Friday, March 5, 2021

Latest Posts

ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ವಿಶ್ವದ ನಂಬರ್ ಒನ್ ಟೆನ್ನಿಸ್​ ಆಟಗಾರ ನೊವಾಕ್ ಜೊಕೊವಿಕ್ ರಷ್ಯಾದ ಡೇನಿಲ್ ಮೆಡ್ವೆಡೆವ್ ಅವರನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಅವರು 7-5, 6-2, 6-2ರಿಂದ ಮೆಡ್ವೆಡೆವ್ ಅವರನ್ನು ಸೋಲಿಸಿದರು. ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಒಂಬತ್ತನೇ ಬಾರಿಗೆ ಗೆಲ್ಲುವುದರೊಂದಿಗೆ, ಜೊಕೊವಿಕ್‌ ಅವರ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯ ಸಂಖ್ಯೆ 18 ಕ್ಕೆ ತಲುಪಿದೆ.
ಅಲ್ಲದೆ ಒಂದೇ ಗ್ರ್ಯಾಂಡ್​ಸ್ಲಾಮ್​ ಪ್ರಶಸ್ತಿಯನ್ನು 9 ಅಥವಾ ಅದಕ್ಕಿಂತ ಹೆಚ್ಚುಬಾರಿ ಗೆದ್ದ ವಿಶ್ವದ 2ನೇ ಟೆನಿಸ್ ಪ್ಲೇಯರ್​ ಎಂಬ ಶ್ರೇಯಕ್ಕೆ ಪಾತ್ರರಾದರು. ಸ್ಪೇನ್​ನ ರಾಫೆಲ್ ನಡಾಲ್ 13 ಬಾರಿ​ ಫ್ರೆಂಚ್ ಓಪನ್​ ಗೆದ್ದು ಮೊದಲ ಸ್ಥಾನದಲ್ಲಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss