ನವೆಂಬರ್ 19 ರಂದು ಬ್ಯಾಂಕ್ ನೌಕರರ ಮುಷ್ಕರ: ಬ್ಯಾಂಕ್ ಮತ್ತು ಎಟಿಎಂ ಸೇವೆಗಳ ಮೇಲೆ ಪರಿಣಾಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನವೆಂಬರ್ 19 ರಂದು ಬ್ಯಾಂಕಿಂಗ್ ನೌಕರರು ದೇಶಾದ್ಯಂತ ಮುಷ್ಕರ ನಡೆಸಲಿದ್ದಾರೆ. ಇದು ಎಟಿಎಂಗಳ ಜೊತೆಗೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟುಗಳ ಬಗ್ಗೆ ಮುಂಜಾಗ್ರತೆ ವಹಿಸುವುದು ಉತ್ತಮ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ನವೆಂಬರ್ 19 ಮೂರನೇ ಶನಿವಾರ ಬ್ಯಾಂಕುಗಳು ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತೆರೆದಿರುತ್ತವೆ. ಎರಡನೇ ಮತ್ತು ನಾಲ್ಕನೇ ಶನಿವಾರಗಳು ಬ್ಯಾಂಕ್ ರಜೆ.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ಅವರು ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ (ಐಬಿಎ) ನೋಟಿಸ್ ನೀಡಿದ್ದಾರೆ. ತಮ್ಮ ಸದಸ್ಯರು ಈ ತಿಂಗಳ 19.11.2022 ರಂದು ಮುಷ್ಕರ ನಡೆಸಲು ಮುಂದಾಗಿದ್ದಾರೆ ಎಂಬುದು ನೋಟಿಸ್‌ನ ಸಾರಾಂಶವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!