ಹೊಸದಿಗಂತ ಡಿಜಿಟಲ್ ಡೆಸ್ಕ್:
ರೋಹಿತ್ ಶರ್ಮಾ ದಿಢೀರ್ ಆಗಿ ನಿವೃತ್ತಿ ಘೋಷಿಸಿಕೊಂಡ ನಂತರ ಟೆಸ್ಟ್ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಪ್ರತಿಯೊಬ್ಬರನ್ನು ಕಾಡುತ್ತಿದೆ. ಇದಕ್ಕೆ ಆಯ್ಕೆ ಸಮಿತಿ ಹಾಗೂ ಬಿಸಿಸಿಐ ಕೂಡ ಹೊರತಾಗಿಲ್ಲ.
ಈಗ ನಾಯಕತ್ವದ ರೇಸ್‌ನಲ್ಲಿ ಶುಭ್‌ಮನ್ ಗಿಲ್,ಕೆಎಲ್ ರಾಹುಲ್ ಹಾಗೂ ಜಸ್ಪ್ರಿತ್ ಬುಮ್ರಾ ಹೆಸರು ಹೆಚ್ಚಾಗಿ ಕೇಳಿ ಬರುತ್ತಿದ್ದು, ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಆರ್ ಅಶ್ವಿನ್ ಯಾರು ನಾಯಕರಾದ್ರೆ ಉತ್ತಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅಶ್ವಿನ್, ಇಬ್ಬರೂ ಆಟಗಾರರು ಒಟ್ಟಿಗೆ ಏಕಕಾಲದಲ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಈಗ ಟೀಂ ಇಂಡಿಯಾದಲ್ಲಿ ಅಸಲಿ ಚಾಲೆಂಜ್ ಇದೆ. ಜೂನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿ ನಡೆಯಲಿರುವ ಹಿನ್ನೆಲೆಯಲ್ಲಿ, ಆಯ್ಕೆದಾರರು ಭಾರತೀಯ ಕ್ರಿಕೆಟ್ ತಂಡದ ಮುಂದಿನ ನಾಯಕನನ್ನು ಆಯ್ಕೆ ಮಾಡಬೇಕಾಗುತ್ತದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ಬುಮ್ರಾ ತಂಡವನ್ನು ಮುನ್ನಡೆಸಿದ್ದರು. ಹಾಗಾಗಿ ಈಗಲೂ ಅವರೇ ಉತ್ತಮ ಆಯ್ಕೆಯಾಗಿದ್ದಾರೆ.
ಭಾರತದ ಬ್ಯಾಟಿಂಗ್ ದಿಗ್ಗಜರು ಒಟ್ಟಿಗೆ ನಿವೃತ್ತಿ ಹೊಂದುವ ಉದ್ದೇಶದ ಬಗ್ಗೆ ಯಾವುದೇ ಸುಳಿವು ಅವರು ನೀಡಿರಲಿಲ್ಲ. ಇದು ಭಾರತೀಯ ಕ್ರಿಕೆಟ್‌ಗೆ ಪರೀಕ್ಷೆಯ ಸಮಯ ಎಂದು ಅಶ್ವಿನ್ ಹೇಳಿದ್ದಾರೆ.