ಹೊಸದಿಗಂತ ವರದಿ ಹುಬ್ಬಳ್ಳಿ:
ಸರ್ಕಾರದ ಮುಂದೆ ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಮಹಿಳೆಯರಂತೆ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯವಿಲ್ಲ ಕುರಿತು ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಚೆನ್ನಾಗಿ ನಡೆಯುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ ಅವರು ಶಾಲಾ ವಿದ್ಯಾರ್ಥಿಗಳ ಸಂವಾದಲ್ಲಿ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ಭೇಟಿ ನೀಡಿ ಚರ್ಚಿಸಲಾಗುವುದು ಎಂದರು.
ಸಾರಿಗೆ ಸಂಸ್ಥೆ ಜನರ ಸೇವೆ ಒದಗಿಸಲು ಇದೆ. ಇಡೀ ವಿಶ್ವದಲ್ಲೇ ಸಾರಿಗೆ ಲಾಭದಲ್ಲಿ ಇರಲು ಸಾಧ್ಯವಿಲ್ಲ. ಅದೇ ರೀತಿ ರಾಜ್ಯದಲ್ಲಿ ಸಹ ನಮ್ಮ ಸಂಸ್ಥೆ ನಷ್ಟದಲ್ಲಿ ಇದೆ ಎಂದು ಹೇಳಿದರು.
ಬಿಜೆಪಿ ಅವರು ಯಾವಾಗಲೂ ಬುರಡೆ ಬಿಡುತ್ತಾರೆ. ಅವರು ಅಧಿಕಾರಕ್ಕೆ ಬಂದಿರುವುದು ಶಾಸಕ ಖರೀದಿಸಿಯೇ. ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ದೇಶದಲ್ಲಿ ಕಾಂಗ್ರೆಸ್ ನ 214 ಸೇರಿ ಬೇರೆ ಬೇರೆ ಪಕ್ಷಗಳ 450 ಶಾಸಕರನ್ನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದರು.