ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸುತ್ತಿದ್ದಂತೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಡ ತೀವ್ರವಾಗಿ ಕೇಳಿಬರುತ್ತಿದೆ.
ಇತ್ತ ಇದರ ನಡುವೆ ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ಆದೇಶ ನೀಡಿದೆ. ಬಿಜೆಪಿ ನಾಯಕರ ವಾದದ ಪ್ರಕಾರ ಈಗ ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಬೇಕು ಅಲ್ಲವೇ ಎಂದು ಕೇಳಿದ್ದಾರೆ.
ಚುನಾವಣಾ ಬಾಂಡ್ ದುರುಪಯೋಗ ಮಾಡಿಕೊಂಡಿರುವ ಆರೋಪದ ಮೇಲೆ ಈಗ ನಿರ್ಮಲಾ ಸೀತಾರಾಮನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕೂಡ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.