Wednesday, November 5, 2025

ಈಗ ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ವಿದ್ಯುತ್ ಚಾಲಿತ ಚಾರ್ಜಿಂಗ್ ಸೆಂಟರ್: ಇವಿ ಚಾಲಕ, ಮಾಲೀಕರು ಫುಲ್ ಖುಷ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಿಎಂ ಇ-ಡ್ರೈವ್ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿದ್ಯುತ್ ಚಾಲಿತ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ವಿದ್ಯುತ್ ಚಾಲಿತ ವಾಹನ ಬಳಕೆದಾರರು ಫುಲ್ ಖುಷ್ ಆಗಿದ್ದಾರೆ.

ದೇಶಾದ್ಯಂತ 73 ಸಾವಿರ ವಿದ್ಯುತ್ ಚಾಲಿತ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಪ್ರತಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಶೇಕಡ 80ರಿಂದ 100ರಷ್ಟು ಸಹಾಯಧನ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 20ಕ್ಕೂ ಅಧಿಕ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ.

ತಾವು ಮೂರು ವರ್ಷದಿಂದ ಇವಿ ದ್ವಿಚಕ್ರ ವಾಹನ ಬಳಕೆ ಮಾಡುತ್ತಿದ್ದು, ಮೂರು ವರ್ಷದ ಕೆಳಗೆ ಚಾರ್ಜಿಂಗ್ ಪಾಯಿಂಟ್‌ಗಳ ಅಭಾವ ಇತ್ತು. ಈಗ ನಗರದ ಹತ್ತಾರು ಕಡೆಗಳಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ಗಳು ಲಭ್ಯವಿದೆ. ಇದರಿಂದ ವಿದ್ಯುತ್ ಚಾಲಿತ ವಾಹನ ಬಳಕೆದಾರರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಚಾರ್ಜಿಂಗ್ ಕೇಂದ್ರದ ಸಿಬ್ಬಂದಿ ರೇವಿನ್ ಮೋಸೆಸ್, ನಮ್ಮ ಕೇಂದ್ರದಲ್ಲಿ ಎರಡು ಚಾರ್ಜಿಂಗ್ ವ್ಯವಸ್ಥೆ ಇದೆ. ಇದರಿಂದ ಪ್ರವಾಸಿಗರಿಗೆ ಹಾಗೂ ಸ್ಥಳೀಯ ಎಲೆಕ್ಟ್ರಿಕ್ ಕಾರುಗಳ ಮಾಲೀಕರಿಗೂ ಅನುಕೂಲವಾಗಲಿದೆ ಎಂದು ಸ್ಥಳೀಯರಾದ ಚರಣ್ ಅಭಿಪ್ರಾಯಿಸಿದ್ದಾರೆ.

error: Content is protected !!