Wednesday, August 17, 2022

Latest Posts

ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ: ಯಡಿಯೂರಪ್ಪನವರು ಪಕ್ಷದ ಶಕ್ತಿ ಎಂದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಸಿಎಂ, ಯಡಿಯೂರಪ್ಪನವರು ನಿರಂತರವಾಗಿ ಹೋರಾಟದಿಂದ ಬಂದವರು. ಬೆಂಗಳೂರಿಗೆ ಹೋದ ನಂತರ ಅವರೊಂದಿಗೆ ಮಾತನಾಡುತ್ತೇನೆ.
ಯಡಿಯೂರಪ್ಪ ಭಾರತೀಯ ಜನತಾ ಪಕ್ಷದ ಶಕ್ತಿ. ಮುಂದಿನ ಚುನಾವಣೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಇದ್ದೇ ಇರುತ್ತದೆ. ಯಡಿಯೂರಪ್ಪನವರ ಮಹತ್ವ ಏನೆಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಆಯೋಜಿಸಿರುವ ಭೋಜನಕೂಟದಲ್ಲಿ ಭಾಗಿಯಾಗಲು ಸಿಎಂ ದೆಹಲಿಗೆ ಆಗಮಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!