ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ , ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಬಳಿಕ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು .ಪ್ರಾಮಾಣಿಕವಾಗಿ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ತಿಳಿಸಿದರು.
ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಇದರಿಂದ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ತಿಳಿಸಿದರು.