12- 17 ವಯೋಮಿತಿಯ ಮಕ್ಕಳಿಗೆ ಕೋವ್ಯಾಕ್ಸ್ ಲಸಿಕೆ ನೀಡಲು ಎನ್‌ಟಿಎಜಿ ಸಮ್ಮತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

12 ರಿಂದ 17 ವಯೋಮಿತಿಯವರಿಗೆ ಸೆರಂ ಇನ್ಸ್ಟಿಟ್ಯೂಟ್‌ನ ಕೋವ್ಯಾಕ್ಸ್ ಕೋವಿಡ್-19 ಲಸಿಕೆ ನೀಡಲು ಎನ್‌ಟಿಎಜಿಐ ಒಪ್ಪಿಗೆ ನೀಡಿದೆ.
ಶುಕ್ರವಾರ ಪ್ರತಿ ರಕ್ಷಣೆ ಕುರಿತಾದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) 12-17 ವಯೋಮಿತಿಯ ಮಕ್ಕಳಿಗೆ ನೀಡುವ ಕೋವ್ಯಾಕ್ಸ್ ಕೋವಿಡ್-19 ಲಸಿಕೆ ನೀಡಲು ಒಪ್ಪಿಗೆ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.
ಮುಖ್ಯಮಂತ್ರಿಗಳ ಜೊತೆ ಕೋವಿಡ್ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಮಕ್ಕಳಿಗೆ ಲಸಿಕೆ ನೀಡಲು ಆದ್ಯತೆ ನೀಡಬೇಕು ಎಂದು ಹೇಳಿದ್ದರು.
ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲು ವಿಶೇಷ ಅಭಿಯಾನ ಆರಂಭಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದರು. ಪ್ರಧಾನಿ ಸಭೆಯ ಬಳಿಕ ಶುಕ್ರವಾರ ಎನ್‌ಟಿಎಜಿಐ ಮಕ್ಕಳ ಲಸಿಕೆ ಬಳಕೆಗೆ ಒಪ್ಪಿಗೆ ನೀಡಿದೆ.
18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಏಪ್ರಿಲ್ 10ರಂದು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮಕ್ಕಳಿಗೆ ನೀಡುವ ಲಸಿಕೆಗಳ ಬಗ್ಗೆ ಇನ್ನೂ ಅಧ್ಯಯನಗಳು ನಡೆಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!