ಮತ್ತಷ್ಟು ಅಭಿವೃದ್ಧಿಯತ್ತ ಭಾರತ, ಟಾಪ್-500 ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ಶಿಪ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದ್ದು,ಯುವಕರಿಗೆ ಪೂರಕವಾಗಿರುವಂತಹ ಬಜೆಟ್‌ ಇದಾಗಿದೆ.

ಮುಂದಿನ ಐದು ವರ್ಷಗಳಲ್ಲಿ ಟಾಪ್ 500 ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ಶಿಪ್ ಅವಕಾಶವನ್ನು ಸರ್ಕಾರ ನೀಡಲಿದೆ. ಈ ಇಂಟರ್ನ್‌ಶಿಪ್ 12 ತಿಂಗಳವರೆಗೆ ಇರುತ್ತದೆ. ಇದರಲ್ಲಿ ಯುವಕರು ವ್ಯಾಪಾರದ ನೈಜ ವಾತಾವರಣವನ್ನು ತಿಳಿದುಕೊಳ್ಳಲು ಮತ್ತು ವಿವಿಧ ವೃತ್ತಿಗಳ ಸವಾಲುಗಳನ್ನು ಎದುರಿಸಲು ಅವಕಾಶವನ್ನು ಪಡೆಯುತ್ತಾರೆ. ಇದರ ಅಡಿಯಲ್ಲಿ ಯುವಕರಿಗೆ ಪ್ರತಿ ತಿಂಗಳು 5,000 ರೂ. ಅಷ್ಟೇ ಅಲ್ಲ ಅವರಿಗೆ ಒಟ್ಟು 6,000 ರೂಪಾಯಿ ಸಹಾಯಧನ ನೀಡಲಾಗುವುದು.

ಕಂಪೆನಿಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ತರಬೇತಿ ವೆಚ್ಚಗಳನ್ನು ಮತ್ತು ಇಂಟರ್ನ್‌ಶಿಪ್ ವೆಚ್ಚದ ಶೇಕಡಾ 10 ರಷ್ಟು ಭರಿಸಬೇಕಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!