Wednesday, October 5, 2022

Latest Posts

ಬೆತ್ತಲೆ ಫೋಟೋಶೂಟ್: ರಣವೀರ್ ಸಿಂಗ್ ಹೇಳಿಕೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಜಾಲತಾಣದಲ್ಲಿ ತಮ್ಮ ಬೆತ್ತಲೆ ಫೋಟೋ ಪೋಸ್ಟ್ ಮಾಡಿ ವಿವಾದವನ್ನು ಮೈಮೇಲೆಳೆದುಕೊಂಡಿರುವ ಬಾಲಿವುಡ್​ ನಟ ರಣವೀರ್ ಸಿಂಗ್ ಇಂದು ತನಿಖಾಧಿಕಾರಿ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ.
ಸರ್ಕಾರೇತರ ಸಂಸ್ಥೆಯ (ಎನ್‌ಜಿಒ) ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಳೆದ ತಿಂಗಳು ಇಲ್ಲಿನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಆಗಸ್ಟ್ 22 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು. ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯೂಸಿಯಾಗಿದ್ದ ರಣವೀರ್ ಸಿಂಗ್​ ಅಂದು ವಿಚಾರಣೆಗೆ ಗೈರಾಗಿದ್ದರು ಎರಡು ವಾರಗಳ ಕಾಲ ಸಮಯಾವಕಾಶ ಬೇಕೆಂದು ಪೊಲೀಸರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು.
ಅದರಂತೆ, ಇಂದು ಬೆಳಗ್ಗೆ 7 ಗಂಟೆಗೆ ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಉತ್ತರಿಸಿ ಬೆಳಗ್ಗೆ 9.30 ರ ಸುಮಾರಿಗೆ ಪೊಲೀಸ್ ಠಾಣೆಯಿಂದ ನಿರ್ಗಮಿಸಿದ್ದಾರೆ. ಅಗತ್ಯವಿದ್ದರೆ ಮತ್ತೆ ಕರೆಯಲಾಗುವುದೆಂದು ಸೂಚನೆ ಕೊಡಲಾಗಿದೆ ಎಂದು ತನಿಖಾಧಿಕಾರಿ ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!