ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೆ ಕಡಿಮೆಯಾಗುತ್ತಿದ್ದು, ಸೋಂಕು ಸಂಪೂರ್ಣವಾಗಿ ತಗ್ಗುವ ಸಾಧ್ಯತೆ ಇದೆ ಎಂದು ತಜ್ಞರು ಆಶಾವಾದ ವ್ಯಕ್ತಪಡಿಸಿದ್ದಾರೆ.
ಡಿಸೆಂಬರ್‌ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿತ್ತು. ಜೆಎನ್1 ರೂಪಾಂತರಿ ಇದಕ್ಕೆ ಪುಷ್ಠಿ ನೀಡಿತ್ತು. ಆದರೆ ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.
ಆಸ್ಪತ್ರೆಗೆ ದಾಖಲಾಗುತ್ತಿರುವ ಕೋವಿಡ್ ಸೋಂಕಿತರು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಡಿಸೆಂಬರ್ ಹಾಗೂ ಜನವರಿಯಲ್ಲಿ ಸಾವಿರದಷ್ಟಿದ್ದ ಪ್ರಕರಣಗಳು ಇದೀಗ 715 ಕ್ಕೆ ಇಳಿಕೆಯಾಗಿವೆ. ಜೊತೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.