ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನೂಪುರ್ ಶರ್ಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೂಪುರ್ ಶರ್ಮಾ ತಮ್ಮ ಬಂಧನವನ್ನು ಪ್ರಶ್ನಿಸಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದ ಅನಿರೀಕ್ಷಿತ ಮತ್ತು ಕಟುವಾದ ಟೀಕೆಗಳ ನಂತರ, ತನಗೆ ಜೀವ ಬೆದರಿಕೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ ಎಂದು ಆರೋಪಿಸಿ ಶರ್ಮಾ ತನ್ನ ವಿರುದ್ಧ ದಾಖಲಾಗಿರುವ 9 ಎಫ್‌ಐಆರ್‌ಗಳಲ್ಲಿ ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ತನ್ನ ವಿರುದ್ಧ ದೆಹಲಿಯಲ್ಲಿ ಎಫ್‌ಐಆರ್ ದಾಖಲಾಗಿರುವುದರಿಂದ, ಇತರ ಸ್ಥಳಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ದೆಹಲಿ ಪ್ರಕರಣದೊಂದಿಗೆ ಜೋಡಿಸಬೇಕು ಎಂದು ಕೋರಿದ್ದಾರೆ.
ನೂಪುರ್ ಶರ್ಮಾ ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡುವ ಮೂಲಕ ದೇಶಾದ್ಯಂತ ದೊಡ್ಡ ವಿವಾದಕ್ಕೆ ಕಾರಣರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!