April 13, 2026
Monday, April 13, 2026
spot_img

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಹೆರಿಗೆ ಮಾಡಿದ ನರ್ಸ್‌: ತಾಯಿ, ಮಗು ದಾರುಣ ಅಂತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಜಯಪುರದ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಮಗು ಮೃತಪಟ್ಟಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಢಳವಾರ ಗ್ರಾಮದ ಮೈತ್ರಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೈತ್ರಾರನ್ನು ನೋಡಲು ಆಸ್ಪತ್ರೆಯಲ್ಲಿ ಯಾವುದೇ ವೈದ್ಯರು ಇರಲಿಲ್ಲ. ನರ್ಸ್‌ ಹಾಗೂ ಇನ್ನಿಬ್ಬರು ಸಿಬ್ಬಂದಿ ಸೇರಿ ಹೆರಿಗೆ ಮಾಡಿಸಿದ್ದಾರೆ.

ಹೆರಿಗೆ ವೇಳೆಯೇ ನವಜಾತ ಗಂಡುಮಗು ಮೃತಪಟ್ಟಿದೆ. ನಂತರ ಮೈತ್ರಾಗೆ ತೀವ್ರ ರಕ್ತಸ್ರಾವವಾಗಿದೆ. ಅದನ್ನು ನೋಡಿ ಹೆದರಿದ ಸಿಬ್ಬಂದಿ ತಕ್ಷಣವೇ ಅವರನ್ನು ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಲು ನೋಡಿದ್ದಾರೆ.

ಆದರೆ ಆಂಬುಲೆನ್ಸ್‌ನಲ್ಲಿಯೇ ಮೈತ್ರಾ ಮೃತಪಟ್ಟಿದ್ದಾರೆ. ಬಾಣಂತಿ ಹಾಗೂ ಮಗುವಿನ ಸಾವಿಗೆ ಆಸ್ಪತ್ರೆಯೇ ಹೊಣೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ವೈದ್ಯಾಧಿಕಾರಿ ಸಂಪತ್‌ ಕುಮಾರ್‌ ಈ ಬಗ್ಗೆ ತನಿಖೆ ನಡೆಸಿ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !