ಕುಸಿದುಬಿದ್ದ ನರ್ಸರಿ ಶಾಲಾ ಕಟ್ಟಡ, ತಪ್ಪಿದ ಭಾರೀ ಅನಾಹುತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನರ್ಸರಿ ಶಾಲಾ ಕಟ್ಟಡ ಕುಸಿದುಬಿದ್ದಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ.

ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಕಟ್ಟಡ ಇಂದು ಮುಂಜಾನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.

ಈ ನರ್ಸರಿ ಶಾಲೆಯಲ್ಲಿ 80ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಡುತ್ತಿದ್ದರು. ಆದರೆ ಇಂದು ಮುಂಜಾನೆ ಯಾರೂ ಇಲ್ಲದ ವೇಳೆ ಈ ದುರಂತ ಸಂಭವಿಸಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶಾಲೆ ಕಟ್ಟಡ ಕುಸಿದ ಪರಿಣಾಮ ಕಟ್ಟಡದ ಅವಶೇಷಗಳಡಿ ಸಿಲುಕಿ ವಾಹನಗಳು ಜಖಂ ಆಗಿದೆ. ಘಟನಾ ಸ್ಥಳದಲ್ಲಿ ಕಟ್ಟಡದ ಅವಶೇಷಗಳ ತೆರವು ಕಾರ್ಯ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!