ಆಸ್ಪತ್ರೆಯಲ್ಲಿ ಇಬ್ಬರು ಯುವಕರನ್ನು ಮನಸೋ ಇಚ್ಛೆ ಥಳಿಸಿದ ನರ್ಸ್‌: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಹಾರ ರಾಜ್ಯದ ಛಾಪ್ರಾದ ಆಸ್ಪತ್ರೆಯ ಕೊಠಡಿಯಲ್ಲಿ ಇಬ್ಬರು ಯುವಕರನ್ನು ಬಂಧಿಸಿ ನರ್ಸ್‌ ಬಿದಿರು ಕಟ್ಟಿಗೆಯಿಂದ ತೀವ್ರವಾಗಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ದಾದಿಯೊಬ್ಬರು ಇಬ್ಬರು ಯುವಕರನ್ನು ದೊಣ್ಣೆಯಿಂದ ಥಳಿಸುತ್ತಿದ್ದರೆ, ಮತ್ತೊಬ್ಬರು ಆಕೆಯನ್ನು ಬೆಂಬಲಿಸಿ ಮಾತನಾಡುತ್ತಿರುವುದನ್ನು ಕಾಣಬಹುದು.

ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರು ಯುವಕರು ವೈದ್ಯಕೀಯ ಪ್ರಮಾಣಪತ್ರಕ್ಕಾಗಿ ಛಾಪ್ರಾದ ಸದರ್ ಆಸ್ಪತ್ರೆಗೆ ಬಂದಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಕಂಡುಬರುವ ದೋಷಗಳನ್ನು ಫೋನ್‌ಗಳಲ್ಲಿ ಚಿತ್ರೀಕರಿಸಲು ಮುಂದಾಗಿದ್ದಾರೆ. ಇದನ್ನು ನೋಡಿದ ಆಸ್ಪತ್ರೆ ಸಿಬ್ಬಂದಿ  ವಿಡಿಯೋ ತೆಗೆಯದಂತೆ ತಡೆದಿದ್ದಾರೆ. ಆದರೂ ಕೇಳದೆ ವಿಡಿಯೋ ತೆಗೆಯುತ್ತಿದ್ದವರನ್ನು ಆಸ್ಪತ್ರೆ ಸಿಬ್ಬಂದಿ ಹಿಡಿದು ಕೊಠಡಿಯೊಂದರಲ್ಲಿ ಬಂಧಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿವಿಲ್ ಸರ್ಜನ್ ಡಾ.ಸಾಗರ್ ದುಲಾಲ್ ಸಿನ್ಹಾ ಅವರು, ಈ ಘಟನೆ ಕುರಿತು ಮಾಧ್ಯಮ ಪ್ರತಿನಿಧಿಗಳಿಂದ ಮಾಹಿತಿ ಪಡೆದ ಬಳಿಕ ಆಸ್ಪತ್ರೆಯ ಅಧೀಕ್ಷಕರ ಮಧ್ಯಸ್ಥಿಕೆಯಲ್ಲಿ ಯುವಕರನ್ನು ಬಿಡುಗಡೆ ಮಾಡಿದರು.

ಈ ಘಟನೆ ಕುರಿತು ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕೆಲವು ನೆಟ್ಟಿಗರು ಬಿಹಾರ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ ವೀಡಿಯೊವನ್ನು ಟ್ಯಾಗ್ ಮಾಡಿದ್ದಾರೆ. ಯುವಕರನ್ನು ಥಳಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!