ಹೊಸದಿಗಂತ ಡಿಜಿಟಲ್ ಡೆಸ್ಕ್:
ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಚಂಪಕ್ ಮೈದಾನದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆ ತೀವ್ರವಾಗಿ ಗಾಯಗೊಂಡಿದ್ದಳು. ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ., ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಲ್ಲೇ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ನಡೆದ ದೌರ್ಜನ್ಯ ಆಕ್ರೋಶಕ್ಕೆ ಕಾರಣವಾಗಿದೆ.
ಆಸ್ಪತ್ರೆಯ ಮೂಲಗಳ ಪ್ರಕಾರ, ವಿದ್ಯಾರ್ಥಿನಿಗೆ ಅನೇಕ ಗಾಯಗಳಾಗಿದ್ದು, ಅತ್ಯಾಚಾರ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ರತ್ನಗಿರಿಯ ನರ್ಸಿಂಗ್ ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ದಾಳಿಯಿಂದ ತೀವ್ರ ಕೋಪಗೊಂಡ ನರ್ಸ್‌ಗಳು ಮತ್ತು ಆಸ್ಪತ್ರೆ ಸಿಬ್ಬಂದಿ, ಅಪರಾಧಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು.