ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡಿಕೆ ಹಾಗೂ ಕೊಕ್ಕೋ ಧಾರಣೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕರಾವಳಿಯಲ್ಲಿ ಕೃಷಿವಲಯ ಮತ್ತೆ ಖುಷ್ ಆಗಿದೆ.
ಸಿಂಗಲ್ ಚೋಲ್, ಡಬ್ಬಲ್ ಚೋಲ್ ಅಡಿಕೆ ಧಾರಣೆ ಏರಿಕೆ ಕಂಡಿದ್ದು, ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 5ರೂ., ಸಿಂಗಲ್ ಚೋಲ್ ಕೆ.ಜಿ.ಗೆ 20ರೂ., ಡಬ್ಬಲ್ ಚೋಲ್ ಕೆ.ಜಿ.ಗೆ 20ರೂ. ಏರಿಕೆಯಾಗಿದ್ದರೆ, ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 8 ರಿಂದ 10 ರೂ., ಸಿಂಗಲ್ ಚೋಲ್ ಕೆ.ಜಿ.ಗೆ 20ರಿಂದ 25 ರೂ., ಡಬ್ಬಲ್ ಚೋಲ್ ಕೆ.ಜಿ.ಗೆ 20ರಿಂದ 23 ರೂ.ನಷ್ಟು ಏರಿಕೆ ಕಂಡಿದೆ.
ಇದೇ ವೇಳೆ ಕೊಕ್ಕೊ ಧಾರಣೆಯಲ್ಲಿಯೂ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ ಕೆ.ಜಿ.ಗೆ 120 ರೂ., ಒಣ ಕೊಕ್ಕೊ ಕೆ.ಜಿ.ಗೆ 500-575ರೂ. ವರೆಗೆ ಖರೀದಿಯಾಗಿದೆ.