ಪೌಷ್ಠಿಕಾಂಶ ತುಂಬಿರುವ ರಾಗಿ ಹೆಲ್ತ್‌ ಮಿಕ್ಸ್‌, ಅಂಗನವಾಡಿ ಮಕ್ಕಳಿಗೆ ಹೊಸ ಫುಡ್‌ ಪರಿಚಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ ಸಹಯೋಗದೊಂದಿಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಯೋಜಿಸುತ್ತಿದೆ.

ಸದ್ಯ ಸರ್ಕಾರಿ ಶಾಲೆಗಳಿಗೆ ಪೌಷ್ಟಿಕಾಂಶ ಭರಿತ ಮಿಶ್ರಣವನ್ನು ಪೂರೈಸಲು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿದೆ. ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಮೇಲೆ ವಿಶೇಷ ಗಮನಹರಿಸುವ ಮೂಲಕ ಈ ಕಾರ್ಯಕ್ರಮವನ್ನು ಅಂಗನವಾಡಿ ಮಕ್ಕಳಿಗೆ ವಿಸ್ತರಿಸುವ ಯೋಜನೆ ಈಗ ಇದೆ. ಜುಲೈ ವೇಳೆಗೆ ಕಾರ್ಯಕ್ರಮ ಆರಂಭವಾಗುವ ನಿರೀಕ್ಷೆ ಇದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಯಾದಗಿರಿ, ಚಾಮರಾಜನಗರ, ಬಾಗಲಕೋಟೆ, ಹಾವೇರಿ ಮತ್ತು ಧಾರವಾಡದಂತಹ ಜಿಲ್ಲೆಗಳಾದ್ಯಂತ ಸುಮಾರು 4,000 ಮಕ್ಕಳಿಗೆ ಮೊಟ್ಟ ಮೊದಲಿಗೆ ಈ ಹೆಲ್ತ್ ಮಿಕ್ಸ್ ನೀಡುವ ಯೋಜನೆಯಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!