ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಿಜೆಗೆ ಪ್ರಮಾಣ ವಚನ ಬೋಧಿಸಿದರು.
ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.