ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 71 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಐಟಿಐ ವಿದ್ಯಾರ್ಹತೆ ಮತ್ತು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 18,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.