Monday, October 3, 2022

Latest Posts

ಕರ್ನಾಟಕ ಹೈಕೋರ್ಟ್​ ಹೆಚ್ಚುವರಿ ನ್ಯಾಯಾಧೀಶರಿಂದ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ಹೈಕೋರ್ಟ್​ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಐವರು ನ್ಯಾಯಮೂರ್ತಿಗಳು ಇಂದು ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆ ಆವರಣದಲ್ಲಿ ಸರಳ ಸಮಾರಂಭ ನಡೆಯಿತು.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿರುವ ನ್ಯಾ. ಅನಿಲ್ ಭೀಮಸೇನ ಕಟ್ಟಿ, ನ್ಯಾ.ಗುರುಸಿದ್ಧಯ್ಯ ಬಸವರಾಜ, ನ್ಯಾ.ಚಂದ್ರಶೇಖರ್ ಮೃತ್ಯುಂಜಯ ಜೋಶಿ, ನ್ಯಾ. ಉಮೇಶ್ ಮಂಜುನಾಥ್ ಭಟ್ ಅಡಿಗ ಹಾಗೂ ನ್ಯಾ.ತಲಕಾಡು ಗಿರಿಗೌಡ ಶಿವಶಂಕರೇ ಗೌಡ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ರಾಜ್ಯ ಉಚ್ಛ ನ್ಯಾಯಾಲಯದ ಪ್ರಭಾರಿ ಮುಖ್ಯ ನ್ಯಾಯಾಧೀಶ ನ್ಯಾ. ಅಲೋಕ್ ಅರಾಧೆ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!