ಒಬಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ: 5 ಲಕ್ಷಕ್ಕೂ ಹೆಚ್ಚು ಜನರು ಭಾಗಿ , 4 ಸಾವಿರ ಬಸ್ ವ್ಯವಸ್ಥೆ

ಹೊಸದಿಗಂತ ವರದಿ, ಕಲಬುರಗಿ:

ಅ.30ರಂದು ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶವು ನಡೆಯಲಿದ್ದು, ಎರಡೂವರೆ ಲಕ್ಷ ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. 5ರಿಂದ 6 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ರಾಜ್ಯ ವಕ್ತಾರ ಮತ್ತು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರು ತಿಳಿಸಿದರು.

ನಾಗನಹಳ್ಳಿಯ ರದ್ದೇವಾಡಗಿ ಲೇಔಟ್, ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾವೇಶವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು 3 ಸಾವಿರ ಕಾರ್ಯಕರ್ತರ ತಂಡವನ್ನು ನಿಯೋಜಿಸಲಾಗಿದೆ. 224 ವಿಧಾನಸಭಾ ಕ್ಷೇತ್ರಗಳ, 200ಕ್ಕೂ ಹೆಚ್ಚು ಜಾತಿಗಳ, ಒಬಿಸಿ ಸಮುದಾಯದ 5 ಲಕ್ಷಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 4 ಸಾವಿರ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. 20 ಸಾವಿರ ಚತುಷ್ಚಕ್ರ ವಾಹನಗಳ ವ್ಯವಸ್ಥೆ ಮಾಡಿದೆ. 200 ಎಕರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ. 50 ಕಲ್ಯಾಣಮಂಟಪದಲ್ಲಿ ಊಟ, ವಸತಿ, ಸ್ನಾನಕ್ಕೆ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದರು. ಜೇವರ್ಗಿ, ರಾಯಚೂರು ಸೇರಿ ಹತ್ತಿರದ ಪ್ರದೇಶಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದರು.

ಅ.30ರಂದು ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಕೇಂದ್ರದ ಸಚಿವರು, ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಸಂಸದರು ಇತರ ಗಣ್ಯರು ಪಾಲ್ಗೊಳ್ಳುವರು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!