ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಕೇಸ್ ನಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅ.8ಕ್ಕೆ ಕಾಯ್ದಿರಿಸಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತನಿಖಾಧಿಕಾರಿ ಬದಲಾವಣೆ ಮತ್ತು ತನಿಖಾಧಿಕಾರಿ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ (ಸೆ.28) ನಡೆದ ವಿಚಾರಣೆಯಲ್ಲಿ ಸ್ನೇಹಮಯಿ ಕೃಷ್ಣ ಖುದ್ದು ವಾದ ಮಂಡಿಸಿದರು.
ಸದ್ಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯ ಆದೇಶವನ್ನ ಅ.8ಕ್ಕೆ ಕೋರ್ಟ್ ಮುಂದೂಡಿದೆ.