ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಲೇಖನ: ಸಂಜಯ್ ರಾವತ್ ವಿರುದ್ಧ ದೇಶದ್ರೋಹದ ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ.

ಪಕ್ಷದ ಮುಖವಾಣಿ ಸಾಮನಾದಲ್ಲಿ ಡಿ.11ರಂದು ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಲೇಖನ ಪ್ರಕಟವಾಗಿದೆ. ಈ ಲೇಖನ ದುರುದ್ದೇಶದಿಂದ ಕೂಡಿದೆ ಎಂದು ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ದೂರು ನೀಡಿದ್ದರು.

ರೋಖ್‌ಟೋಕ್ ಅಂಕಣದಲ್ಲಿ ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಅವರನ್ನು ಬಿಜೆಪಿ ಹೈಕಮಾಂಡ್ ಅವಮಾನಿಸಿದೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಗುರಿ ಕಾಂಗ್ರೆಸ್ ಸೋಲು ಅಲ್ಲ, ಬದಲಿಗೆ ಶಿವರಾಜ್ ಸಿಂಗ್ ಅವರನ್ನು ಸಂಪೂರ್ಣವಾಗಿ ತೊಡೆದುಹಾಕುವುದು ಎಂದು ಬರೆಯಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!