ಹೊಸದಿಗಂತ ಡಿಜಿಟಲ್ ಡೆಸ್ಕ್:
2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಟ್ವಿಟರ್ ಮತ್ತು ಯೂಟ್ಯೂಬ್‌ಗೆ ಕೇಂದ್ರವು ಆದೇಶಿಸಿದೆ .
ಇಂಡಿಯಾ: ದಿ ಮೋದಿ ಕ್ವಶ್ಚನ್ (India: The Modi Question) ಬಗ್ಗೆ ಬ್ರಿಟನ್‌ನಲ್ಲಿಯೇ ಆಕ್ರೋಶ ವ್ಯಕ್ತವಾಗುತ್ತಿದೆ. ಬ್ರಿಟನ್ ಪ್ರಧಾನಿ, ಸಂಸದರಿಂದ ಹಿಡಿದು ಎಲ್ಲರೂ ಬಿಬಿಸಿ ಡಾಕ್ಯುಮೆಂಟರಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಡಾಕ್ಯುಮೆಂಟರಿ ಕುರಿತ ಎಲ್ಲ ಲಿಂಕ್, ಪೋಸ್ಟ್ ಹಾಗೂ ವಿಡಿಯೊಗಳನ್ನು ಡಿಲೀಟ್ ಮಾಡಬೇಕು ಎಂದು ಟ್ವಿಟರ್ ಹಾಗೂ ಯುಟ್ಯೂಬ್‌ಗೆ ಆದೇಶಿಸಿದೆ ಎಂದು ತಿಳಿದುಬಂದಿದೆ.
ಕೇಂದ್ರ ಮಾಹಿತಿ ಹಾಗೂ ಪ್ರಸಾರ (I&B) ಸಚಿವಾಲಯವು ಎರಡೂ ಸೋಷಿಯಲ್ ಮೀಡಿಯಾಗಳಿಗೆ ಸೂಚನೆ ನೀಡಿದೆ. ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ಲಿಂಕ್, ಪೋಸ್ಟ್, ವಿಡಿಯೊಗಳನ್ನು ಕೂಡಲೇ ಡಿಲೀಟ್ ಮಾಡಬೇಕು ಎಂಬುದಾಗಿ ಸೂಚಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
2021ರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಲಿಂಕ್, ಪೋಸ್ಟ್, ವಿಡಿಯೊಗಳನ್ನು ಡಿಲೀಟ್ ಮಾಡಲು ಆದೇಶಿಸಲಾಗಿದೆ.
ಡಾಕ್ಯುಮೆಂಟರಿಯು ದುರುದ್ದೇಶಪೂರಕ ಎಂದು ಈಗಾಗಲೇ ಕೇಂದ್ರ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ. ಯುಟ್ಯೂಬ್‌ನಿಂದ ಡಾಕ್ಯುಮೆಂಟರಿಯನ್ನು ಈಗಾಗಲೇ ಡಿಲೀಟ್ ಮಾಡಲಾಗಿದೆ.
ಭಾರತದಲ್ಲೂ ನಿವೃತ್ತ ನ್ಯಾಯಮೂರ್ತಿಗಳು, ರಾಯಭಾರಿಗಳು ಸೇರಿ ನೂರಾರು ಗಣ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.