ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್: 8 ಮಂದಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಆರೋಪದಡಿ 8 ಮಂದಿಯನ್ನು ಗುಜರಾತ್‍ನಲ್ಲಿ ಬಂಧಿಸಲಾಗಿದೆ.

ಇದುವರೆಗೆ 185 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಎಎಪಿ (AAP), ಪ್ರಧಾನಿ ವಿರುದ್ಧ ದೇಶಾದ್ಯಂತ ಪೋಸ್ಟರ್ ಅಭಿಯಾನ ಆರಂಭಿಸಿ `ಮೋದಿ ಹಟಾವೋ, ದೇಶ್ ಬಚಾವೋ’ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಬಂಧನವಾಗಿದೆ.

ಆರೋಪಿಗಳು ಸರ್ಕಾರಿ ಆಸ್ತಿಗೆ ಹಾನಿ ಮಾಡಲು ಪ್ರಯತ್ನಿಸಿದ್ದರು ಎಂದು ಗುಜರಾತ್ (Gujarat) ಪೊಲೀಸರು ತಿಳಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ತಮ್ಮ ಕಾರ್ಯಕರ್ತರ ಬಂಧನದ ಕುರಿತು ಪ್ರತಿಕ್ರಿಯಿಸಿ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ, ಬ್ರಿಟಿಷರ ವಿರುದ್ಧ ಪೋಸ್ಟರ್ ಹಾಕುವವರನ್ನು ಬಂಧಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!