ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ದೇಶಾದ್ಯಂತ ಬಿಜೆಪಿ ಪ್ರತಿಭಟನೆ, ಖರ್ಗೆ ಕ್ಷಮೆಯಾಚನೆಗೆ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಹೇಳಿಕೆಯನ್ನು ಆಕ್ಷೇಪಿಸಿರುವ ಬಿಜೆಪಿ, ಖರ್ಗೆ ಅವರು ಕ್ಷಮೆಯಾಚಿಸಬೇಕು ಹಾಗೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದೆ. ಕರ್ನಾಟಕದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರ್ಗೆ ಹೇಳಿಕೆಯಿಂದ ರಾಜಕೀಯ ಸಂಘರ್ಷ ಭಾನುವಾರ ಪಟನಾ ಕಾರ್ಯಕ್ರಮವೊಂದರಲ್ಲಿ … Continue reading ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ದೇಶಾದ್ಯಂತ ಬಿಜೆಪಿ ಪ್ರತಿಭಟನೆ, ಖರ್ಗೆ ಕ್ಷಮೆಯಾಚನೆಗೆ ಆಗ್ರಹ