ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್‌ಪುರದಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸುಧೀರ್ ಓಜಾ ಎಂಬ ವಕೀಲರು ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು ನೀಡಿದ್ದಾರೆ. ನ್ಯಾಯಾಲಯ ಅದನ್ನು ಅಂಗೀಕರಿಸಿದ್ದು, ಫೆಬ್ರವರಿ 10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ.
ಅರ್ಜಿದಾರರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಿದ್ದಾರೆ ಮತ್ತು ಅವರ ವಿರುದ್ಧವೂ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.