ಸಾವರ್ಕರ್ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾವರ್ಕರ್ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಹಿಂದು ಮುಖಂಡ ತೇಜಸ್ ಗೌಡ ಅವರು ಶಂಕರಪುರ ಪೊಲೀಸರಿಗೆ ದೂರು ನೀಡಿದ್ದಾರೆ.

ಗಾಂಧಿ ಜಯಂತಿಯಂದು ಸಚಿವರು ಸಾವರ್ಕರ್ ಬಗ್ಗೆ ಅವಹೇಳನವಾಗಿ ಮಾತಾಡಿದ್ದಾರೆ. ವೀರಸಾವರ್ಕರ್ ರವರು ಬ್ರಾಹ್ಮಣನಾಗಿದ್ದರೂ ಗೋಮಾಂಸವನ್ನು ತಿನ್ನುತ್ತಿದ್ದರು. ಅವರು ಗೋಹತ್ಯೆ ವಿರೋಧಿಸುತ್ತಿರಲಿಲ್ಲ ಎಂದು ಬೇಜವಾಬ್ದಾರಿತನದಿಂದ ಹೇಳಿಕೆ ನೀಡಿದ್ದಾರೆ. ಆರೋಗ್ಯ ಸಚಿವರ ಹೇಳಿಕೆಯಿಂದ ನಮಗೆ ತುಂಬಾ ನೋವುಂಟಾಗಿರುತ್ತದೆ ಎಂದು ಹೇಳಿದ್ದಾರೆ.

ಇದು ಕೋಮು ದ್ವೇಶ, ಕೋಮು ಪ್ರಚೋದನೆಗೆ ಹೆಚ್ಚು ಒತ್ತಡ ತರುವಂತಹ ಅಂಶ ಹೊಂದಿದೆ. ಆದ್ದರಿಂದ ಪರಿಶೀಲಿಸಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ದೂರು ದಾಖಲಿಸಬೇಕು. ಸೂಕ್ತ ಕ್ರಮ ತೆಗೆದುಕೊಂಡು, ಕಾನೂನು ಎಲ್ಲರಿಗೂ ಒಂದೇ ಎಂದು ಅರಿವು ಮೂಡಿಸಿಬೇಕು ಎಂದು ಹಿಂದೂ ಮುಖಂಡ ತೇಜಸ್ ಗೌಡ ಮನವಿ ಮಾಡಿಕೊಂಡಿದ್ದಾರೆ.

ಸದ್ಯ ತೇಜಸ್ ಗೌಡ ನೀಡಿದ ದೂರು ಸ್ವೀಕರಿಸಿ, ಕಾನೂನು ತಜ್ಞರ ಮೊರೆ ಹೋಗಿದ್ದಾರೆ ಪೊಲೀಸರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!