ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ಪ್ರಭಾಕರ್ ಭಟ್​ಗೆ ತಾತ್ಕಾಲಿಕ ರಿಲೀಫ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್​ ಸೂಚಿಸಿದೆ.

ತಮ್ಮ ವಿರುದ್ಧ ಎಫ್​ಐಆರ್ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿದೆ. ಸರ್ಕಾರದ ಪರ ಎಸ್​ಪಿಪಿಗೆ ನ್ಯಾಯಮೂರ್ತಿ ರಾಜೇಶ್ ರೈ ಸೂಚಿಸಿದ್ದಾರೆ. ಇದರೊಂದಿಗೆ ಕಲ್ಲಡ್ಕ ಪ್ರಭಾಕರ್​ ಭಟ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಇದನ್ನು ರದ್ದುಗೊಳಿಸುವಂತೆ ಸೂಚಿಸಬೇಕೆಂದು ಹೈಕೋರ್ಟ್​ಗೆ ಕಲ್ಲಡ್ಕ ಪ್ರಭಾಕರ್ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿ ರಾಜೇಶ್ ರೈ, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!