July 11, 2026
Saturday, July 11, 2026
spot_img

ಅಖಿಲೇಶ್ ಯಾದವ್ ಪುತ್ರಿಯ ವಿರುದ್ಧ ಅಶ್ಲೀಲ ಕಾಮೆಂಟ್: ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಎಂ ಯೋಗಿ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪುತ್ರಿಯ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಹಾಕುತ್ತಿರುವ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಸೂಚನೆ ನೀಡಿದ್ದಾರೆ.

ಕೃತ್ಯವೆಸಗುವವರನ್ನು ಕ್ಷಮಿಸಲು ಸಾಧ್ಯವಿಲ್ಲ

ಈ ಕುರಿತು ಉತ್ತರ ಪ್ರದೇಶದ ಅಂಜಗಢದಲ್ಲಿ ಮಾತನಾಡಿದ ಸಿಎಂ ಯೋಗಿ, ಹೆಣ್ಣು ಮಕ್ಕಳು ಸಾರ್ವಜನಿಕ ಚರ್ಚೆಯ ವಿಷಯವಾಗಬಾರದು. ಅಂತಹ ಕೃತ್ಯವೆಸಗುವವರನ್ನು ಕ್ಷಮಿಸಲು ಸಾಧ್ಯವಿಲ್ಲ. ಎಲ್ಲರ ಮಗಳು, ಎಲ್ಲರ ಸಹೋದರಿಯೂ ಕೂಡ ಒಂದೇ ಎನ್ನುವ ಮೌಲ್ಯಗಳೊಂದಿಗೆ ಬೆಳೆದಿದ್ದೇವೆ. ಇಲ್ಲಿ ಭೇದಭಾವ ಮಾಡಿಲ್ಲ. ಈಗಾಗಲೇ ಅಖಿಲೇಶ್ ಯಾದವ್ ಅವರ ಪುತ್ರಿಯ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಹಾಕುತ್ತಿರುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಹೇಳಿದ್ದೇನೆ ಎಂದು ತಿಳಿಸಿದರು.

ಎಫ್‌ಐಆರ್ ದಾಖಲು

ಈ ಸಂಬಂಧ ಹಲವರ ವಿರುದ್ಧ ಕಾನ್ಪುರ ಪೊಲೀಸ್ ಕಮಿಷನರೇಟ್‌ನ ಸೈಬರ್ ಸೆಲ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೆಲವು ಸೋಶಿಯಲ್ ಮೀಡಿಯಾ ಬಳಕೆದಾರರು ಅಖಿಲೇಶ್ ಯಾದವ್ ಪುತ್ರಿಯ ಫೋಟೋಗಳನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಅತ್ಯಂತ ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !