ಹೊಸದಿಗಂತ ವರದಿ, ಮಡಿಕೇರಿ:
ಕೊಡವ ಜನಾಂಗದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಭಾವಚಿತ್ರಕ್ಕೆ ಅಶ್ಲೀಲ ಕಾಮೆಂಟ್ ಮಾಡಿದ ಯುವಕನನ್ನು ಮಡಿಕೇರಿಯ ಸೆನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ನಿವಾಸಿ ಗಂಗಾಧರ ಜಮಾದಾರಕನಿ(22) ಎಂದು ಗುರುತಿಸಲಾಗಿದೆ.
ಕೊಡವ ಮಹಿಳೆಯೊಬ್ಬರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಪಲೋಡ್ವಮಾಡಿದ್ದ ಭಾವಚಿತ್ರಕ್ಕೆ “ಬೆಳಗಾವಿ ಜಿಎಂಜಿ” ಎಂಬ ಫೇಸ್‌ಬುಕ್ ಖಾತೆದಾರ ಅಶ್ಲೀಲವಾಗಿ ಕಾಮೆಂಟ್ ಮಾಡಿರುವ ಕುರಿತು ದೂರು ಮಡಿಕೇರಿಯ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಯನ್ನು ಪತ್ತೆಗಾಗಿ ಸೆನ್ ಪೊಲೀಸ್ ಠಾಣೆಯ ಡಿಎಸ್ಪಿ ರವಿ, ಪಿಎಸ್ಐ ರವೀಂದ್ರ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡುವ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದ ಖಾತೆದಾರನನ್ನು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಸಾಮಾಜಿಕ ಜಾಲತಾಣ (Facebook/ Whatsapp/ X/ Instagram & etc) ಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ರೀತಿಯ ಸಂದೇಶ/ಭಾವಚಿತ್ರ/ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳುವಂತೆ ಕೊಡಗು ಪೊಲೀಸರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಕೊಡಗು ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾವಹಿಸಿದ್ದು, ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್‌ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ ಮತ್ತು ಆತಂಕ ಸೃಷ್ಟಿಸುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.